ಶಿಶುನಾಳ ಶರೀಫರು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಶಿಶುನಾಳ ಗ್ರಾಮದಲ್ಲಿ ಕ್ರಿ.ಶ. ೧೮೧೯ ಮಾರ್ಚ ೭ರಂದು ಜನಿಸಿದರು. ಇವರ ತಂದೆ ದೇವಕಾರ ಮನೆತನದ ಇಮಾಮ ಹಜರತ ಸಾಹೇಬರು ಹಾಗು ತಾಯಿ ಹಜ್ಜೂಮಾ. ಇವರ ಪೂರ್ಣ ಹೆಸರು ಮಹಮ್ಮದ ಶರೀಫ. ಮುಲ್ಕಿ ಪರೀಕ್ಷೆ ಪಾಸು ಮಾಡಿದ ಬಳಿಕ ಶರೀಫರು ಕೆಲ ಕಾಲ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರೆಂದು ಕೆಲಸ ಮಾಡಿದರು. ಆದರೆ ಮುಂದೆ ಈ ಕೆಲಸವನ್ನು ಬಿಟ್ಟು, ಕಳಸದ ಗುರು ಗೋವಿಂದಭಟ್ಟರಿಂದ ಅನುಗ್ರಹವಾಯಿತು.
ಕೆಲಸವನ್ನು ಬಿಟ್ಟು ಆಧ್ಯ್ಶಾತ್ಮಚಿಂತನೆಯಲ್ಲಿ ತೊಡಗಿಸಿಕೊಂಡದ್ದರಿಂದ ಶರೀಫರ ತಂದೆ ತಾಯಿ ಅವರಿಗೆ ಕುಂದಗೋಳ ನಾಯಕ ಮನೆತನದ ಫಾತಿಮಾ ಎಂಬ ಕನ್ಯೆಯೊಂದಿಗೆ ಮದುವೆ ಮಾಡಿದರು.
ಕೆಲಸವನ್ನು ಬಿಟ್ಟು ಆಧ್ಯ್ಶಾತ್ಮಚಿಂತನೆಯಲ್ಲಿ ತೊಡಗಿಸಿಕೊಂಡದ್ದರಿಂದ ಶರೀಫರ ತಂದೆ ತಾಯಿ ಅವರಿಗೆ ಕುಂದಗೋಳ ನಾಯಕ ಮನೆತನದ ಫಾತಿಮಾ ಎಂಬ ಕನ್ಯೆಯೊಂದಿಗೆ ಮದುವೆ ಮಾಡಿದರು.
ಕೆಲವು ಸಮಯದ ನಂತರ ಇವರಿಗೆ ಒಂದು ಹೆಣ್ಣು ಮಗು ಜನಿಸಿತು. ದುರ್ದೈವದಿಂದ ಕೆಲವು ತಿಂಗಳುಗಳಲ್ಲಿ ಹೆಂಡತಿ ತೀರಿಕೊಂಡರು. ಶರೀಫರು ಆ ಬಳಿಕ ತಮ್ಮ ಜೀವನವನ್ನು ಆಧ್ಯಾತ್ಮ ಸಾಧನೆಗೆ ಮುಡಿಪಿಟ್ಟರು.
ಶರೀಫರು ಹಾಡಿದ ಪದಗಳು ಧಾರವಾಡ ಜಿಲ್ಲೆಯ ಆಡುಭಾಷೆಯ ಶೈಲಿಯಲ್ಲಿವೆ. ಈ ಪದಗಳಲ್ಲಿ ಕೆಲವು ದೇವಸ್ತುತಿಯ ಪದಗಳಾದರೆ, ಇನ್ನು ಕೆಲವು ಪದಗಳು ತತ್ವಬೋಧನೆಯ ಪದಗಳಾಗಿವೆ. ಇವರ ಪದಗಳ ಕೃತಿಗಳು ಲಭ್ಯವಿಲ್ಲದಿದ್ದರೂ, ಅವು ಬಾಯಿಂದ ಬಾಯಿಗೆ ರಾಗವಾಗಿ ಹರಡಿ ಇಂದೂ ಸಹ ಪ್ರತೀತಿಯಲ್ಲಿವೆ. ಶರೀಫರ ಪದಗಳನ್ನು ಪ್ರಸಿದ್ಧಗೊಳಿಸಿರುವ ಸಿ.ಅಶ್ವತ್ಥರ ಹಾಗೂ ಇತ್ತೀಚಿಗೆ ಬಿಡುಗಡೆಯಾದ ರಘು ದೀಕ್ಷಿತರ ಹಾಡುಗಳನ್ನು ಕೇಳಿ. ಇನ್ನಷ್ಟು ಮಾಹಿತಿಗಾಗಿ ಶ್ರೀಧರ್ ಹಾಗೂ ಗಿರೀಶ್ ಕಾರ್ನಾಡ್ ಅಭಿನಯದ, ಟಿ.ಎಸ್.ನಾಗಾಭರಣರ ನಿರ್ದೇಶನದ ’ಸಂತ ಶಿಶುನಾಳ ಶರೀಫ’ ಚಿತ್ರವನ್ನು ನೋಡಿ.
No comments:
Post a Comment